ಐದ ಕಟ್ಟಿ ಐದ ನೆಗಪಿ ಮನಪವನಧ್ಯಾನ ಭಾವ ದೃಢದಿಂದ ಧ್ಯಾನದಿ ನೋಡಿ; ಕಾಯದ ಗಾಳಿಯ ಸಂಚವ ಶೋಧಿಸಿ ಒಳಗೆ ಜಾರಿದ ಅಮೃತವನು ವಾಯುಮಂಡಲದಲೆತ್ತಿ ನಾಭಿಮಂಡಲದಲ್ಲಿ ನುಂಗಿ ಮಾಯಾಮಂಡಲ ತೋರಲರಿಯ ಬಲ್ಲಡೆ ಗುಹೇಶ್ವರಲಿಂಗದಲ್ಲಿ ಆತ ಶಿವಯೋಗಿ