ಒಂದಕ್ಕೊಂಬತ್ತ ನುಡಿದು ಕಣ್ಣ ಕೆಚ್ಚನೆ ಮಾಡಿ ಗಂಡುಗೆದರಿ ಮುಡುಹಿಕ್ಕಿ ಕೆ[ಲೆ]ವರ ಕಂಡಡಂಜುವೆ ಓಸರಿಸುವೆ ! ಓಡಿದೆನೆಂಬ ಭಂಗವಾದಡಾಗಲಿ. ನಮ್ಮ ಕೂಡಲಸಂಗನ ಶರಣರ ಅನುಭಾವವಿಲ್ಲದವರ ಹೊಲಮೇರೆಯ ಹೊಂದೆ ಹೊಲನ ಬಿಟ್ಟೋಡುವೆ. 448