ಒಂದರ ಮೋರೆಯನೊಂದು ಮೂಸಿನೋಡಿ ಮತ್ತೊಚ್ಚಿ ಬೇಕಿಂಗೆ (ಹೊತ್ತಿಂಗೆ ?) ಕಚ್ಚಿಯಾಡಿ ಹೋದಂತೆಯಾಯಿತ್ತು
ನೋಡಿರೆ
ಕಲಿಯುಗದೊಳಗಣ ಮೇಳಾಪವ ! ಗುರುವೆಂಬಾತ ಶಿಷ್ಯನಂತುವನರಿಯ. ಶಿಷ್ಯನೆಂಬಾತ ಗುರುವಿನಂತುವನರಿಯ. ಭಕ್ತರೆಂಬವರು ಭಕ್ತರೊಳಗೆ ಸಮವಿಲ್ಲ. ಜಂಗಮರೆಂಬವರು ಜಂಗಮದೊಳಗೆ ಸಮವಿಲ್ಲ. ಇದು ಕಾರಣ_ಕಲಿಯುಗದೊಳಗೆ ಉಪದೇಶವ ತೋರುವ (ಮಾಡುವ ?) ಕಾಳಗುರಿಕೆಯ ಮಕ್ಕಳನೇನೆಂಬೆ ಗುಹೇಶ್ವರಾ ?