ಒಂದು ದಿಕ್ಕಿನಲ್ಲಿ ಕತ್ತಲೆಯನಿರಿಸಿ ಒಂದು ದಿಕ್ಕಿನಲ್ಲಿ ತನುವನಿರಿಸಿ ಒಂದು ದಿಕ್ಕಿನಲ್ಲಿ ವಚನವನಿರಿಸಿ ಒಂದು ದಿಕ್ಕಿನಲ್ಲಿ ರುಚಿಯನಿರಿಸಿ ನಾಲ್ಕು ದಿಕ್ಕಿನ ನಡುವೆ ನೀನಿರಬಲ್ಲಡೆ ಎನ್ನ ಬೆಸಗೊಳ್ಳಯ್ಯಾ ಗುಹೇಶ್ವರಾ.