ಒಂದೆರಡಾದುದನಾರೂ ಅರಿಯರು: ಆ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಒಂದೆರಡಾದುದನಾರೂ ಅರಿಯರು: ಆ `ಒಂದು' ಒಂದೆ ಆಯಿತ್ತು
ತ್ರಿತತ್ವವಾಯಿತ್ತು
ವೇದಾತೀತವಾಯಿತ್ತು
ಭರಿತವಾಯಿತ್ತು
ಪ್ರಾದೇಶಿಕವಾಯಿತ್ತು
ಭಕ್ತಿಗೆ ಸಾಧ್ಯವಾಯಿತ್ತು. ಅದಕ್ಕೆ ಆಧಾರ ದೇಹವಾಯಿತ್ತು. ಅದು ಅಷ್ಟವಿಗ್ರಹ ಸ್ವರೂಪವಾಗಿರುತ್ತಿಪ್ಪುದು. ಮತ್ತಿರುತಿರ್ದ ಒಂದು ಮಾಯಾಶಕ್ತಿಯಂ ಕೂಡಿ
ಗುಣತ್ರಯಂಗಳಂ ಕೂಡಿ
ನಾನಾತ್ಮನೆನಿಸಿಕೊಂಡು_ ವಿಷಯಾತ್ಮ ಇಂದ್ರಿಯಾತ್ಮ ಭೂತಾತ್ಮ ಜೀವಾತ್ಮ ಪರಮಾತ್ಮನೆನಿಸಿಕೊಂಡು
ಪ್ರಾಣಾದಿವಾಯುಗಳಂ ಕೂಡಿಕೊಂಡು ಜಡಪ್ರಕೃತಿಗಳಂ ಹೊತ್ತುಕೊಂಡು ಸಂಕಲ್ಪ_ವಿಕಲ್ಪವೆಂಬ ಉಭಯ ಕರ್ಮಂಗಳಂ ಕಲ್ಪಿಸಿ ನಾನಾಯೋನಿ ಪ್ರಾಪ್ತವಾಗುತ್ತಿರ್ದು
ಲೋಕಾದಿಲೋಕಂಗಳೊಳು ತೊಳಲಿ ಬಳಲಿ ತನ್ನ ಮೊದಲ ಕೂಡುವ ಪ್ರಕಾರಮಂ ಬಯಸಿ ನಾನಾ ವಿಧದಿಂದ ಅರಸಿ ಹರಿವುತ್ತಿಪ್ಪರು ಅಖಿಳ ಜೀವಿಗಳೆಲ್ಲರು. ಇದ ಬೆರಸದೆ; ಬೆರಸಿದ ಸಂಗನಬಸವಣ್ಣನ ನೆನೆನೆನೆದು ಶರಣೆಂದು ಶುದ್ಧನಾದೆನು ಕಾಣಾ ಗುಹೇಶ್ವರಾ.