ಒಡನಿರ್ದ ಸತಿಯೆಂದು ನಚ್ಚಿರ್ದೆನಯ್ಯಾ ಕೈವಿಡಿದ ಸಜ್ಜನೆಯೆಂದು ನಂಬಿರ್ದೆನಯ್ಯಾ. ಅಯ್ಯಾ ನಮ್ಮಯ್ಯನ ಕೈನೊಂದಿತು ತೆಗೆದುಕೊಡಾ ಎಲೆ ಚಂಡಾಲಗಿತ್ತಿ ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದಡೆ ಕೂಡಲಸಂಗಮದೇವನಲ್ಲದೆ ಆರೂ ಇಲ್ಲ.