ಒಡೆದೋಡು ಎನ್ನ ಮನೆಯಲಿಲ್ಲದಂತೆ ಮಾಡಯ್ಯಾ ಕೊಡು ದೇವ ಎನ್ನ ಕೈಯಲೊಂದು ಕರಿಕೆಯನು. `ಮೃಡದೇವಾ ಶರಣೆಂದು ಭಿಕ್ಷಕ್ಕೆ ಹೋದಡೆ ಅಲ್ಲಿ `ನಡೆ ದೇವಾ' ಎಂದೆನಿಸು ಕೂಡಲಸಂಗಮದೇವಾ. 457