ಕಂಡಕಂಡವರೆಲ್ಲ ಗಂಡನೆಂದೆಂಬ ದುಂಡೆಯನವಳ ಸಜ್ಜ[ನ] ಎಂದೆನ್ನಬಹುದೆ ಲಿಂಗಪ್ರಸಾದವನುಂಡು ಅನ್ಯದೈವಂಗಳ ಕೊಂಡಾಡುವವರ ನಮ್ಮ ಕೂಡಲಸಂಗಮದೇವನು ಆ ಭಂಡರಿಗೆ ಮಾಡಿದ ಹುಳುಗೊಂಡವ !