ಕಂಡುದ ಹಿಡಿಯಲೊಲ್ಲದೆ ಕಾಣದುದನರಸಿ ಹಿಡಿದಿಹೆನೆಂದಡೆ ಸಿಕ್ಕದೆಂಬ ಬಳಲಿಕೆಯ ನೋಡಾ. ಕಂಡುದನೆ ಕಂಡು ಗುರುಪಾದವಿಡಿದಲ್ಲಿ ಕಾಣಬಾರದುದ ಕಾಣಬಹುದು ಗುಹೇಶ್ವರಾ.