ಕಕ್ಷೆ ಕರಸ್ಥಲ ಕÀಂಠ ಉತ್ತಮಾಂಗ ಮುಖಸೆಜ್ಜೆ ಅಂಗಂಸೋಂಕೆಂಬದು; ಷಡುಸ್ಥಲದರುಶನಾದಿಗಳಿಗೆ
ಬಹಿರಂಗದಲ್ಲಿ ವೇಷಲಾಂಛನವಯ್ಯಾ. ಅಂತರಂಗದಲ್ಲಿ ನಾಲ್ಕು ಸ್ಥಲ; ಬ್ರಹ್ಮರಂಧ್ರ ಭ್ರೂಮಧ್ಯ ನಾಶಿಕಾಗ್ರ ಚೌಕಮಧ್ಯ
_ಇಂತೀ ಸ್ಥಾನಂಗಳನರಿಯರಾಗಿ! ಬ್ರಹ್ಮರಂಧ್ರದಲ್ಲಿ ಲಿಂಗಸ್ವಾಯತ
ಭ್ರೂಮಧ್ಯದಲ್ಲಿ ಜಂಗಮಸ್ವಾಯತ
ನಾಶಿಕಾಗ್ರದಲ್ಲಿ ಪ್ರಸಾದಸ್ವಾಯತ
ಚೌಕಮಧ್ಯದಲ್ಲಿ ಅನುಭಾವಸ್ವಾಯತ
ಅಷ್ಟದಳಕಮಲದಲ್ಲಿ ಸರ್ವಸ್ವಾಯತ._ ಇದು ಕಾರಣ ಗುಹೇಶ್ವರಾ ನಿಮ್ಮಶರಣರು ಸದಾ ಸನ್ನಹಿತರು.