ಕಟ್ಟಿದಿರಿನಲ್ಲಿ ಶಿವಭಕ್ತನ ಕಂಡು ದೃಷ್ಟವಾರಿ ಶರಣೆಂದಡೆ ಹುಟ್ಟೇಳು ಜನ್ಮದ ಪಾಪ ಬಿಟ್ಟು ಹಿಂಗುವುದು ನೋಡಾ. ಮುಟ್ಟಿ ಚರಣಕ್ಕೆರಗಿದಡೆ ತನು[ವ]ಪ್ಪಿದಂತೆ ಅಹುದು ಪರುಷ ಮುಟ್ಟಿದಂತೆ. ಕರ್ತೃ ಕೂಡಲಸಂಗನ ಶರಣರ ಸಂಗವು ಮತ್ತೆ ಭವಮಾಲೆಗೆ ಹೊದ್ದಲೀಯದು ನೋಡಾ. 140