ಕಡುಜಲಕ್ಕೆ (ಹರಿವ ಜಲಕ್ಕೆ ?) ಇದಿರಾಗಿ ಹರಿವ ಸ್ವಾಮಿಯ ಬರವ ಕಂಡು
ಬಿಡದೆ ಬೆಂಬತ್ತಿಸುವ ಪರಿಯ ನೋಡಾ. ನಡೆ ನುಡಿ ಚೈತನ್ಯ ಒಡಲನೊಂದನು ಮಾಡಿ ಬಿಡದೆ ವೇಧಿಸುವ ಬೆಡಗ ಕಂಡೆನಯ್ಯಾ ! ಕಡೆಗೆ ಸೂಸದ ದೃಷ್ಟಿ
ಹಿಡಿದು ತೊಲಗದ ಹಸ್ತ
ಬೇಡ ಬೇಡ ತನಗೆನ್ನದ ಸಜ್ಜನ ಮಡದಿ
ತನ್ನ ಗಂಡನ ಅಡಗಿ ಕೂಡುವ ಭೇದ !_ ನಡುವಿರುಳು ಕೂಡಿ ನಿಮಿರೆ ಬೆಳಗಾಯಿತ್ತು. ಮಾಡಿ ನೀಡುವನ ಕಂಡು ನಾಡು ಬೀಡೆಲ್ಲ ನೆರೆದು ಕೊಡ ಕೈಯಲ್ಲಿ ಕೊಟ್ಟಡೆ ತೃಪ್ತರಾಗಿ
ಮಾಡುವರು ಹರಸುವರು ನೋಡುವರು ಮನದಣಿಯೆ ಕೊಡುವರು ಕೋಟಿ
ಸಹಜ ಒಂದೆ ಎಂದು ! ಜೋಡ ತೊಡದಾತನ ಮೈಯಲ್ಲಿ
ಕೂಡೆ ಘಾಯವಿಲ್ಲದುದ ಕಂಡು
ನೋಡಿರೆ ಮಸೆ ಮುಟ್ಟದ ಮಹಾಂತನ ! ಬೇಡುವೆನು ಕರುಣವನು
ಪಾದ [ವ]ನೊಸಲಲ್ಲಿ ಸೂಡುವೆನು ಗುಹೇಶ್ವರನ ಶರಣ ಬಸವಣ್ಣಂಗೆ ನಮೋ ನಮೋ ಎಂಬೆನು.