ಕಪ್ಪೆಯ ಶಿರದ ಮೇಲೆ ಎಪ್ಪತ್ತೆರಡು ಪುರವ ಕಂಡೆ ಆ ಪುರದೊಳಗೊಬ್ಬ ನಾರಿಯ ಕಂಡೆ ಆ ನಾರಿಯ ಕೈಯಲ್ಲಿ ನಾರಿವಳ ಸಸಿಯ ಕಂಡೆ. ಇಂತಪ್ಪ ಬೆಡಗಿನ ಕೀಲ ಬಲ್ಲಾತನೆ ಪ್ರಾಣಲಿಂಗಸಂಬಂಧಿಯೆಂದೆನಯ್ಯಾ ಕೂಡಲಸಂಗಮದೇವಾ.