ಕಬ್ಬುನದ ಗುಂಡಿಗೆಯಲ್ಲಿ ರಸದ ಭಂಡವ ತುಂಬಿ ಹೊನ್ನ ಮಾಡ ಬಲ್ಲಡೆ ಅದು ಪರುಷ ಕಾಣಿರಣ್ಣಾ. ಲಿಂಗ ಬಂದು ಉಂಬಡೆ ಪ್ರಸಾದಕಾಯವಪ್ಪಡೆ ಅಂದಂದಿಂಗೆ ಭವಕರ್ಮ ಮುಟ್ಟಲಮ್ಮದು ಕಾಣಿರೆ. ಆದಿಯ ಪ್ರಸಾದಕ್ಕೆ ಬಾಧೆಯಿಲ್ಲ ಕಾಣಿರೆ. ಶಶಿಯಲ್ಲಿ ಕರಗದು ಬಿಸಿಲಲ್ಲಿ ಕೊರಗದು ರಸವುಂಡ ಹೊನ್ನು _ಗುಹೇಶ್ವರಾ ನಿಮ್ಮ ಶರಣ !