Pages   (key to Page Status)   

ಕರಗಿಸಿ ಎನ್ನ ಮನದ ಕಾಳಿಕೆಯ ಕಳೆಯಯ್ಯಾ
ಒರೆಗೆ ಬಣ್ಣಕ್ಕೆ ತಂದೆನ್ನ ಪುಟವನಿಕ್ಕಿ ನೋಡಯ್ಯಾ
ಕಡಿಹಕ್ಕೆ ಬಡಿಹಕ್ಕೆ ತಂದೆನ್ನ ಕಡೆಯಾಣಿಯ ಮಾಡಿ
ನಿಮ್ಮ ಶರಣರ ಪಾದಕ್ಕೆ ತೊಡಿಗೆಯ ಮಾಡಿ ಸಲಹು ಕೂಡಲಸಂಗಮದೇವಾ. 251