ಕರಸ್ಥಲದ ಬೆಳಗಿನೊಳಗೊಂದು ಘನಲಿಂಗದ ಬೆಳಗ ಕಂಡೆ. ಮಹಾಮಂಗಳನಿಳಯನಾಗಿ ತೋರುತ್ತಿದ್ದಾನೆ. ಮಹಾಮಂಗಳನಿಳಯವಾಗಿ ತೋರುತ್ತಿದ್ದಿತ್ತು ಗುಹೇಶ್ವರಲಿಂಗದ ವಾರ್ತೆ. ಸಂಗನಬಸವಣ್ಣನ ನಿವಾಳಿಸುತ್ತಿದ್ದಿತ್ತು.