'ಚಿತ್ರ: ಕರುಳಿನ ಕರೆ ಸಾಹಿತ್ಯ: ಆರ್. ಎನ್. ಜಯಗೋಪಾಲ್ ಸಂಗೀತ: ಎಂ. ರಂಗರಾವ್ ಗಾಯನ: ಎಸ್. ಜಾನಕಿ, ಬಿ. ಕೆ. ಸುಮಿತ್ರ ಮತ್ತು ಸಂಗಡಿಗರು
ಅ ಆ..ಅ ಆ.. ಇ ಈ..ಇ ಈ..
ಅ ಆ ಇ ಈ ಕನ್ನಡದ ಅಕ್ಷರಮಾಲೆ
ಅ ಅ ಅಮ್ಮ ಎಂಬುದೆ ಕಂದನ ಕರುಳಿನ ಕರೆಯೋಲೆ
ಅ ಆ ಇ ಈ ಕನ್ನಡದ ಅಕ್ಷರಮಾಲೆ
ಅಮ್ಮ ಎಂಬುದೆ ಕಂದನ ಕರುಳಿನ ಕರೆಯೋಲೆ
ಆ ಆ ಆಟ ಊಟ ಓಟ ಕನ್ನಡ ಒಂದನೆ ಪಾಠ ಕನ್ನಡ ಭಾಷೆಯ ಕಲಿತವಗೆ ಜೀವನವೇ ರಸದೂಟ ಅ ಆ ಇ ಈ ಕನ್ನಡದ ಅಕ್ಷರಮಾಲೆ ಅಮ್ಮ ಎಂಬುದೆ ಕಂದನ ಕರುಳಿನ ಕರೆಯೋಲೆ
ಇ ಇ ಇದ್ದವರೆಲ್ಲ ಇಲ್ಲದವರಿಗೆ ನೀಡಲೇ ಬೇಕು ಈ ಈ ಈಶ್ವರನಲ್ಲಿ ಎಂದೂ ನಂಬಿಕೆ ಇಡಬೇಕು ಇದ್ದವರೆಲ್ಲ ಇಲ್ಲದವರಿಗೆ ನೀಡಲೇ ಬೇಕು ಈಶ್ವರನಲ್ಲಿ ಎಂದೂ ನಂಬಿಕೆ ಇಡಬೇಕು ಅ ಆ ಇ ಈ ಕನ್ನಡದ ಅಕ್ಷರಮಾಲೆ ಅಮ್ಮ ಎಂಬುದೆ ಕಂದನ ಕರುಳಿನ ಕರೆಯೋಲೆ
ಉ ಉ ಉಪ್ಪು ತಿಂದ ಮನೆಗೆ ಎರಡು ಬಗೆಯ ಬೇಡ ಊ ಊ ಊರಿಗೆ ದ್ರೋಹ ಮಾಡಿ ಬದುಕಲೆಣಿಸಬೇಡ ಉಪ್ಪು ತಿಂದ ಮನೆಗೆ ಎರಡು ಬಗೆಯ ಬೇಡ ಊರಿಗೆ ದ್ರೋಹ ಮಾಡಿ ಬದುಕಲೆಣಿಸಬೇಡ ಅ ಆ ಇ ಈ ಕನ್ನಡದ ಅಕ್ಷರಮಾಲೆ ಅಮ್ಮ ಎಂಬುದೆ ಕಂದನ ಕರುಳಿನ ಕರೆಯೋಲೆ ಋ ೠ ಎ ಏ ಐ.. ಭಾರತ ಮಾತೆಗೆ ಜೈ!
ಒ ಒ ಒಂದೇ ತಾಯಿ ಮಕ್ಕಳು ನಾವು ಒಂದುಗೂಡಬೇಕು ಓ ಓ ಓದನು ಕಲಿತು ದೇಶದ ಸೇವೆಗೆ ನಿಲ್ಲಬೇಕು ಅ ಆ ಇ ಈ ಕನ್ನಡದ ಅಕ್ಷರಮಾಲೆ ಅಮ್ಮ ಎಂಬುದೆ ಕಂದನ ಕರುಳಿನ ಕರೆಯೋಲೆ
ಔ ಅಂ ಅಃ..ಔ ಅಂ ಅಃ.. ಅಃ.. ಆಹಾ.. ಆಹ ಹ ಹ ಹ
ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ