ಕರ್ತನಟ್ಟಿದಡೆ ಮತ್ರ್ಯದಲ್ಲಿ ಮಹಾಮನೆಯ ಕಟ್ಟಿದೆ ಸತ್ಯಶರಣರಿಗೆ ತೊತ್ತು ಭೃತ್ಯನಾಗಿ ಸವೆದು ಬದುಕಿದೆನು. ಕರ್ತನ ಬೆಸನು ಮತ್ತೆ ಬರಲೆಂದಟ್ಟಿದಡೆ ಕೂಡಲಸಂಗಮದೇವರ ನಿರೂಪಕ್ಕೆ ಮಹಾಪ್ರಸಾದವೆಂದೆನು.