ಕರ್ಪುರದ ಗಿರಿಯ ಉರಿ ಹಿಡಿದಡೆ ಇದ್ದಿಲುಂಟೆ ? ಮಂಜಿನ ಶಿವಾಲಯಕ್ಕೆ ಬಿಸಿಲ ಕಳಸವುಂಟೆ ? ಕೆಂಡದ ಗಿರಿಯನರಗಿನ ಬಾಣದಲೆಚ್ಚಡೆ ಮರಳಿ ಬಾಣವನರಸಲುಂಟೆ ? ಗುಹೇಶ್ವರನೆಂಬ ಲಿಂಗವನರಿದು ಮರಳಿ ನೆನೆಯಲುಂಟೆ ?