ಕರ್ಮವೆಂಬ ಅಂಕದೊಡನೆ ತೊಡರಿದೆ. ಬಿನ್ನಪ ಅವಧಾರು ! ನಿಮ್ಮಾಳಿನ ಭಾಷೆಯ; ಕಡೆಗಳಕ್ಕೆ ನೂಂಕುವೆ ಕೆಡಹುವೆನಂಕವ. ಕರೆದಡೋ ಎನಿಸದಡೆ ನಿಮ್ಮಾಳಲ್ಲ. ಶಿವಶರಣೆಂಬ ದಂಡೆಯ ಹೂಡಿ ಗಣಮೇಳಾಪವೆಂಬ ಅಲಗಿನಿಂದಿರಿವೆ ಕೂಡಲಸಂಗಮದೇವಾ.