ಕಲ್ಯಾಣವೆಂಬುದಿನ್ನಾರಿಗೆ ಹೊಗಬಹುದು ?


Pages   (key to Page Status)   

ಕಲ್ಯಾಣವೆಂಬುದಿನ್ನಾರಿಗೆ ಹೊಗಬಹುದು ? ಹೊಗಬಾರದು
ಅಸಾಧ್ಯವಯ್ಯಾ. ಆಸೆ ಆಮಿಷ ಅಳಿದಂಗಲ್ಲದೆ ಕಲ್ಯಾಣದತ್ತಲಡಿಯಿಡಬಾರದು. ಒಳಹೊರಗು ಶುದ್ಧನಾದಂಗಲ್ಲದೆ ಕಲ್ಯಾಣವ ಹೊಗಬಾರದು. ನೀನಾನೆಂಬುದ ಹರಿದಂಗಲ್ಲದೆ ಕಲ್ಯಾಣದ ಒಳಗು ತಿಳಿಯಬಾರದು. ಚೆನ್ನಮಲ್ಲಿಕಾರ್ಜುನಂಗೊಲಿದು ಉಭಯ ಲಜ್ಜೆ ಅಳಿದೆನಾಗಿ ಕಲ್ಯಾಣವಂ ಕಂಡು ನಮೋ ನಮೋ ಎನುತಿದ್ದೆನು.