Pages   (key to Page Status)   

ಕಲ್ಲ ನಾಗರ ಕಂಡಡೆ ಹಾಲನೆರೆಯೆಂಬರು ದಿಟದ ನಾಗರ ಕಂಡಡೆ ಕೊಲ್ಲೆಂಬರಯ್ಯಾ ಉಂಬ ಜಂಗಮ ಬಂದಡೆ ನಡೆಯೆಂಬರು
ಉಣ್ಣದ ಲಿಂಗಕ್ಕೆ ಬೋನವ ಹಿಡಿಯೆಂಬರಯ್ಯಾ. ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದಡೆ
ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯಾ194