ಕಳಹೋದಡೆ ಕನ್ನದುಳಿಯ ಹಿಡಿವೆ ಬಂದಿವಿಡಿದಡೆ ನಿಮ್ಮಿಂದ ಮುಂದೆ ನಡೆವೆನು. ಮನಭೀತಿ ಮನಶಂಕೆಗೊಂಡೆನಾದಡೆ ನಿಮ್ಮಾಣೆ ನಿಮ್ಮ ಪುರಾತನರಾಣೆ. ಆಳ್ದರ ನಡೆ ಸದಾಚಾರವೆನ್ನದಿರ್ದಡೆ ಕಟ್ಟಾಳು ಶಿಷ್ಟತನಕ್ಕೆ ಹೋಹ ಕಷ್ಟವ ನೋಡಾ ಕೂಡಲಸಂಗಮದೇವಾ.