ಕಾಣುತ್ತ ಕಡೆಗಣಿಸಿ ಕೆಡಿಸಿ ಅರಸುವ ಮತಿಭ್ರಷ್ಟ ನಾನು ಲಿಂಗಯ್ಯಾ. ತನುಲೋಭ ಮನಲೋಭ ಧನಲೋಭ ಮುಂದುಗೆಡಿಸಿ ಕಾಡಿಹವೆನ್ನ. ತನು ಮನ ಧನವ ನಿವೇದಿಸಿದವರ ಮನೆಯ ಮಗ ನಾನಯ್ಯಾ ಕೂಡಲಸಂಗಮದೇವಾ. 316