ಕಾಯಕ್ಕೆ ಜೀವಕ್ಕೆ ಸಂದು ಮುನ್ನುಳ್ಳಡೆ ಅದು ಪ್ರಾಣಲಿಂಗವಲ್ಲ ಕಾಣಿರೆ. ಲೋಕಾಚಾರದ ಕೂಳನುಂಡು ಲೀಲೆಯೊಳಾಡುತಿಹರಲ್ಲದೆ ಸಲೆ ಸಂದವರಪ್ಪರೆ ? ಈ ಕಲ್ಲ ಹಿಡಿದಾತ ಆ ಕಲ್ಲನೆತ್ತ ಬಲ್ಲ ? ಇವರೊಬ್ಬರ ಕರೆದಡೆ ಒಬ್ಬರು (ಇಬ್ಬರು ?) `ಓ' ಎಂಬಂತೆ. ಇವರಿಬ್ಬರ ಭಾವ ಹುರುಳಿಲ್ಲ ಕಾಣಾ ಗುಹೇಶ್ವರಾ.