ಕಾಯಗುಣವಳಿದು ಮಾಯಾಮದ ಮುರಿದು ಕಾಮಕ್ರೋಧಂಗಳೆಲ್ಲವು ಹೆರೆಹಿಂಗಿ ಹೋದವು. ಅಂಗವೆಲ್ಲವು ಲಿಂಗಲೀಯವಾಗಿ ಕಂಗಳ ಕಳೆಯ ಬೆಳಗಳಿದು ಗುಹೇಶ್ವರನ ವಿರಹದುರಿಯೊಳಗೆ ಬೆಂದವರ ಮರಳಿ ಸುಟ್ಟಿಹೆನೆಂಬ ಸಿದ್ಧರಾಮಯ್ಯ ಮರುಳ ನೋಡಾ.