ಕಾಯದೊಳಗೆ ಕರುಳುಳ್ಳನ್ನಕ್ಕರ ಹಸಿವು ಮಾಣದು. ಕಾಯದೊಳಗಣ ಕರುಳ ತೆಗೆದು ಕಂಗಳ ಮೇಲಿರಿಸಿ ಇದನಡಿಗೆಯ ಮಾಡಿ ಗಡಣಿಸುತ್ತಿದ್ದೆ ಏನೆಂಬೆ ಗುಹೇಶ್ವರಾ ?