ಕಾಯದ ಕಳವಳಕ್ಕಂಜಿ ಪ್ರಾಣ ಹೋದಲ್ಲಿ ಭವ ಹಿಂಗದು ಪ್ರಕೃತಿ ಬಿಡದು. ವಾಯಕ್ಕಾದಡೆ ಸತ್ತು ದೇವರ ಕೂಡಿಹೆವೆಂಬರು ಈ ವಾಯದ ಮಾತಿಂಗೆ ಆನು ಬೆರಗಾದೆನು. ಕಾಯವಿದ್ದಲ್ಲಿ ಸಾಯದ ಸಾವ ಬಲ್ಲಡೆ ಬೇರಿಲ್ಲ ಗುಹೇಶ್ವರ ತಾನೆ !