ಕಾಯದ ಕಳವಳ ಕಾಣೆನೆಂದಲ್ಲಿ ಹೋಯಿತ್ತು. ಜೀವದ ದುಷ್ಕೃತ ದೂರವೆಂದಲ್ಲಿ ತಪ್ಪಿತ್ತು. ಕಾಯ ಜೀವವೆಂಬ ಸೂತಕ ಮನ ನಿರ್ಮಲವಾದಲ್ಲಿಯೆ ಅಳಿಯಿತ್ತು. ಗುಹೇಶ್ವರನೆಂಬ ಲಿಂಗವನರಿಯ ಬೇಕಾದಡೆ ನಿನ್ನ ಒಳಗ ತೊಳೆದು ನೋಡಾ ಸಿದ್ಧರಾಮಯ್ಯಾ.