ಕಾಯದ ಮೊದಲಿಗೆ ಬೀಜವಾವುದೆಂದರಿಯದೀ ಲೋಕ. ಇಂದ್ರಿಯಂಗಳು ಬೀಜವಲ್ಲ ಆ ಕಳಾಭೇದವಲ್ಲ! ಸ್ವಪ್ನ ಬಂದೆರಗಿತ್ತಲ್ಲಾ! ಇದಾವಂಗೂ ಶುದ್ಧ ಸುಯಿಧಾನವಲ್ಲ ಕಾಣಾ ಗುಹೇಶ್ವರಾ.