ಕಾಯವಿಡಿದು ಲಿಂಗವಿದೆ ಲಿಂಗವಿಡಿದು ಕಾಯವಿದೆ. ಅರಿವಿಡಿದು ಮರಹಿದೆ
ಮರಹುವಿಡಿದು ತೋರುವ ಅರಿವಿದೆ. ಲಿಂಗಾಂಗವೆರಡೂ ನಿಮ್ಮಲ್ಲಿ ಐಕ್ಯವಾದ ಪರಿ ಎಂತು ಹೇಳಾ ? ಸ್ವರವಿಡಿದು ಸಬುದ ಸಮರಸವಾದ ಪರಿ ಎಂತು ಹೇಳಾ ? `ದೇವ' `ಭಕ್ತ' ಎಂಬ ನಾಮ ಸೀಮೆಯಡಗಿ ಗುಹೇಶ್ವರಲಿಂಗದಲ್ಲಿ ತದುಗತವಾಗಿದ್ದ ಪರಿ ಎಂತು ಹೇಳಾ ಸಂಗನಬಸವಣ್ಣಾ ?