ಕಾಯವಿಡಿದು ಹುಟ್ಟಿದಾತ ಕಾಲಾಗ್ನಿರುದ್ರನಾಗಲಿ ಕಾಯವಿಡಿದು ಹುಟ್ಟಿದಾತ ಕಾಮಸಂಹಾರಿಯಾಗಲಿ ಕಾಯವಿಡಿದು ಹುಟ್ಟಿದಾತ ಅನಾದಿ ಪರಮೇಶ್ವರನಾಗಲಿ ಅರಿವು ಸಾಧ್ಯವಾಗದು ಆರಿಗೆಯು. ಗುಹೇಶ್ವರಲಿಂಗದಲ್ಲಿ-ನೀನು ಕಾಯವಿಡಿದು ಕಲ್ಪಿತವ ಹೊದ್ದೆಯೆಂಬುದು ಕಾಣ ಬಂದಿತ್ತು ನೋಡಾ ಚೆನ್ನಬಸವಣ್ಣಾ.