ಕಾಲದಿಂದ ಕಡೆಮುಟ್ಟ ಮಾಡಿದ ಲೇಸು ಒಂದು ದಿನ ಉದಾಸೀನವ ಮಾಡಿದಡೆ ಅದೆಲ್ಲವು ವ್ಯರ್ಥವಾಗಿ ಹೋಹುದು ಕೇಳಯ್ಯಾ. ಸಾವಿರ ನೋಂಪಿಯ ನೋಂತು ಒಂದು ಬಾರಿ ಹಾದರವನಾಡಿದಡೆ ಆ ನೋಂಪಿಯೆಲ್ಲವು ನೀರಲ್ಲಿ ನೆರೆದು ಹೋಹಂತೆ ಕೇಳಯ್ಯಾ. ನಾನು ಎಷ್ಟು ಭಕ್ತಿಯ ಮಾಡಿದಡೇನು ನಿಮ್ಮ ಶರಣರ ಮನವೆಳ್ಳನಿತು ನೊಂದಡೆ
ಎನ್ನ ಭಕ್ತಿಯಭಿಮಾನ ಹೋಯಿತ್ತಯ್ಯಾ. ಕೂಡಲಸಂಗಮದೇವಾ
ನಿಮ್ಮ ಶರಣರ ಮುನಿಸನಾವಪರಿಯಲ್ಲಿ ತಿಳುಹುವೆ ಹೇಳಾ
ಎಲೆ ಪ್ರಭುವೆ.