ಕಾಲಲಿ ಕಟ್ಟಿದ ಗುಂಡು ಕೊರಳಲಿ ಕಟ್ಟಿದ ಬೆಂಡು ತೇಲಲೀಯದು ಗುಂಡು ಮುಳುಗಲೀಯದು ಬೆಂಡು ಇಂತಪ್ಪ ಸಂಸಾರಶರಧಿಯ ದಾಂಟಿಸಿ ಕಾಲಾಂತಕನೆ ಕಾಯೋ ಕೂಡಲಸಂಗಯ್ಯಾ.