ಕಾಲಿಲ್ಲವೆಂಬರಯ್ಯಾ ಪ್ರಭುದೇವರ, ಸಂಸಾರಸೂತಕವ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕಾಲಿಲ್ಲವೆಂಬರಯ್ಯಾ ಪ್ರಭುದೇವರ
ಸಂಸಾರಸೂತಕವ ಮೆಟ್ಟನಾಗಿ. ಕೈಯಿಲ್ಲವೆಂಬರಯ್ಯಾ ಪ್ರಭುದೇವರ ಪರಧನವ ಕೊಳ್ಳನಾಗಿ. ಕಿವಿಯಿಲ್ಲವೆಂಬರಯ್ಯಾ ಪ್ರಭುದೇವರ ಅನ್ಯವ ಕೇಳನಾಗಿ. ಮೂಗಿಲ್ಲವೆಂಬರಯ್ಯಾ ಪ್ರಭುದೇವರ ದುರ್ಗಂಧಕ್ಕೆಳಸನಾಗಿ. ಎದೆಯಿಲ್ಲವೆಂಬರಯ್ಯಾ ಪ್ರಭುದೇವರ ಪರಸ್ತ್ರೀಯನಪ್ಪನಾಗಿ. ಇದು ಕಾರಣ-ಕೂಡಲಚೆನ್ನಸಂಗಮದೇವಾ ಪ್ರಭುದೇವರ ಒಕ್ಕುಮಿಕ್ಕ ಪ್ರಸಾದವ ಕೊಂಡು ನಾನು ಧನ್ಯನಾದೆನು ಕಾಣಾ ಸಂಗನಬಸವಣ್ಣಾ.