ಕಿಚ್ಚಿನ ದೇವನು ಕೆಂಡದ ದೇವನು ಮಾರಿಯ ದೇವನು ಮಸಣದ ದೇವನು ತಿರುಕ ಗೊರವನೆಂದು ಅಲ್ಲಲ್ಲಿ ಒಂದೊಂದನಾಡುತ್ತಿಪ್ಪರಯ್ಯಾ. ನಾ ನಿಮ್ಮ ಪೂಜಿಸಿ ನಷ್ಟಸಂತಾನವಾಗಿ ಬಟ್ಟಬಯಲಲ್ಲಿ ಬಿದ್ದು ಕೆಟ್ಟೆನು ಗುಹೇಶ್ವರಾ.