ಕಿರಿಯರಾದಡೇನು ? ಹಿರಿಯರಾದಡೇನು


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕಿರಿಯರಾದಡೇನು ? ಹಿರಿಯರಾದಡೇನು ? ಅರಿವಿಂಗೆ ಹಿರಿದು ಕಿರಿದುಂಟೆ ? ಆದಿ ಅನಾದಿ ಇಲ್ಲದಂದು
ಅಜಾಂಡ ಬ್ರಹ್ಮಾಂಡ ಕೋಟಿಗಳುದಯವಾಗದಂದು ಗುಹೇಶ್ವರಲಿಂಗದಲ್ಲಿ ನೀನೊಬ್ಬನೆ ಮಹಾಜ್ಞಾನಿ ಎಂಬುದು ಕಾಣಬಂದಿತ್ತು ಕಾಣಾ ಚೆನ್ನಬಸವಣ್ಣಾ.