ಕುದುರನೇಸ ತೊಳೆದಡೆಯೂ ಕೆಸರು ಮಾಬುದೆ ಎನ್ನ ಕಾಯದಲುಳ್ಳ ಅವಗುಣಂಗಳ ಕಳೆದು ಕೃಪೆಯ ಮಾಡಯ್ಯಾ. ಕಂಬಳಿಯಲ್ಲಿ ಕಣಕವ ನಾದಿದಂತೆ ಕಾಣಿರೇ ಎನ್ನ ಮನ. ಕೂಡಲಸಂಗಮದೇವಾ ನಿಮಗೆ ಶರಣೆಂದು ಶುದ್ಧ ಕಾಣಯ್ಯಾ. 260