ಕುರುಹುಳ್ಳನ್ನಕ್ಕ ಸಮಯದ ಹಂಗು ಅರಿದಹೆನೆಂಬನ್ನಕ್ಕ ಆತ್ಮದ ಹಂಗು `ಅಲ್ಲ' `ಅಹುದು' ಎಂಬನ್ನಕ್ಕ ಎಲ್ಲರ ಹಂಗು ಗುಹೇಶ್ವರನೆಂಬನ್ನಕ್ಕ ಲಿಂಗದ ಹಂಗು ಬೇಕು ಘಟ್ಟಿವಾಳಣ್ಣಾ.