Pages(key to [[Help:Page Status{{!}}Page Status]])
ಕುಲದಲಧಿಕನು ಹೋಗಿ ಹೊಲೆಗೇರಿಯಲ್ಲಿ ಮನೆಯ ಕಟ್ಟಿದಡೆ ಕುಲ ಕೆಡದಿಪ್ಪ ಈ ಪರಿಯ ನೋಡಾ ! ಆತನ ಕುಲದವರೆಲ್ಲರು ಮುಖವ ನೋಡಲೊಲ್ಲದಡೆ ಕುಲವುಳ್ಳವರೆಲ್ಲರೂ ಕೈವಿಡಿದರು. ಕುಲಗೆಟ್ಟವನೆಂದು ತಿಳಿದು ವಿಚಾರಿಸಲು ಹೊಲೆಗೆಟ್ಟು ಹೋಯಿತ್ತು ಕಾಣಾ ಗುಹೇಶ್ವರಾ.