ಕೆಂಡದ ಗಿರಿಯ ಮೇಲೊಂದು ಅರಗಿನ ಕಂಬವಿದ್ದಿತ್ತು ನೋಡಯ್ಯಾ. ಅರಗಿನ ಕಂಬದ ಮೇಲೆ ಹಂಸೆಯಿದ್ದಿತ್ತು. ಕಂಭ ಬೆಂದಿತ್ತು ಹಂಸೆ ಹಾರಿತ್ತು ಗುಹೇಶ್ವರಾ