ಕೆಂಡದ ಮಳೆ ಕರೆವಲ್ಲಿ ಉದಕವಾಗಿರಬೇಕು. ಜಲಪ್ರಳಯವಾದಲ್ಲಿ ವಾಯುವಿನಂತಿರಬೇಕು. ಮಹಾಪ್ರಳಯವಾದಲ್ಲಿ ಆಕಾಶದಂತಿರಬೇಕು. ಜಗತ್‍ಪ್ರಳಯವಾದಲ್ಲಿ ತನ್ನ ತಾ ಬಿಡಬೇಕು ಗುಹೇಶ್ವರನೆಂಬ ಲಿಂಗ ತಾನಾಗಿರಬೇಕು.