ಕೆಳಗೇಳು ಲೋಕಂಗಳಿಲ್ಲದ ಮುನ್ನ,


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕೆಳಗೇಳು ಲೋಕಂಗಳಿಲ್ಲದ ಮುನ್ನ
ಮೇಲೇಳು ಲೋಕಂಗಳಿಲ್ಲದ ಮುನ್ನ ಸಹಸ್ರ (ಸಮಸ್ತ ?) ಬ್ರಹ್ಮಾಂಡಗಳಿಲ್ಲದ ಮುನ್ನ
ಅಲ್ಲಿಂದತ್ತತ್ತ; ಬಸವಣ್ಣಾ ನೀನು ಲಿಂಗಭಕ್ತ
ಜಂಗಮಪ್ರಾಣಿ ! ಶಶಿಧರನ ಶರಣಂಗೆ ವೃಷಧರ ಸ್ವಾಯತವಾಗಿ
ನಮ್ಮ ಗುಹೇಶ್ವರಲಿಂಗಕ್ಕೆ ಸಂಗನಬಸವಣ್ಣನೆ ಭಕ್ತನೆಂದರಿದು ನಾನು ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.