Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕೈಯಲ್ಲಿ ಡಾಣೆ ಮನದಲ್ಲಿ ಕ್ರೋಧ ವಚನದಲ್ಲಿ ಕಿಂಕಲ
ಲಿಂಗದ ವಾರ್ತೆ ನಿನಗೇಕೆ ಹೇಳಾ ಬಸವಾ ? ಜಂಗಮವೆ ಲಿಂಗವೆಂಬ ಶಬ್ದಸಂದೇಹಸೂತಕಿ ನೀನು
ಸಜ್ಜನ ಸದ್ಭಕ್ತಿಯ ಮಾತು ನಿನಗೇಕೆ ಹೇಳಾ ಬಸವಾ ? ಕಬ್ಬುನದ ರೂಪು ಪರುಷವ ಮುಟ್ಟಿದಡೆ ಹೊನ್ನಾಯಿತ್ತಲ್ಲದೆ ಪರುಷವಪ್ಪುದೆ ಹೇಳಾ ಬಸವಾ ? ಗುಹೇಶ್ವರನೆಂಬ ಪರುಷದ ಪುತ್ಥಳಿಯನರಿಯಬಲ್ಲಡೆ ನಿನ್ನ ನೀನೆ ತಿಳಿದು ನೋಡಾ ಸಂಗನಬಸವಣ್ಣಾ.