ಕೊಂಕಣ ದ್ವೀಪದಲ್ಲಿ ಒಂದು ಕಪಿ ಹುಟ್ಟಿತ್ತು ತಪವ ಮಾಡುವ ಸಪ್ತ ಋಷಿಯರ ನುಂಗಿತ್ತು ನವನಾಥಸಿದ್ಧರ ತೊತ್ತಳದುಳಿಯಿತ್ತು
ಅರುಹಿರಿಯರ ತಲೆಯ ಮೆಟ್ಟಿ ಅರಿಯಿತ್ತು. ಕಪಿಜನ ವೈರಿ ಸರ್ಪನ ಹೇಳಿಗೆಯಲ್ಲಿ ನಿದ್ರೆಗೆಯ್ಯಿತ್ತು. ಯೋಗಿಗಳ ಭೋಗಿಗಳ ಕೊಲ್ಲದ ಕೊಲೆಯ ಕೊಂದಿತ್ತು. ಕಾಮನ ಅರೆಯ ಮೆಟ್ಟಿ ಕೂಗಿತ್ತು
ಕೋಳಿಯ ಹಂಜರನನಾಸಿಕ ಬೆಕ್ಕ ನುಂಗಿತ್ತು
ಕೋಳಿಯ ಅರ್ಕಜದ ಅರಿವನರಿವ ಅರುಹಿರಿಯರ ಮಿಕ್ಕು ; ಭಾವಸೊಕ್ಕನುಂಡು ಕೊಕ್ಕರನಾಯಿತ್ತು. ಹಿಂದಿರ್ದ ಕೋಳಿಯ ಕೊಕ್ಕರನ ಕಪಿಯ
ಭಾವವ ಅರಿಯದಿರ್ದ ಕಾರಣ_ ಕೆದರಿದ ಚರಣ ಉಡುಗಿ
ಮರಣವರಿಯದೆ
ಕರಣದೇಹತ್ವವಿಲ್ಲದೆ
ಲಿಂಗೈಕ್ಯ_ತಾನೆ ಪ್ರಾಣ ಪುರುಷ. ಇದನರಿದು ನುಂಗಿದಾತನೆ ಪರಮಶಿವಯೋಗಿ_ ಭಂಗವರಿಯದ
ಜನನದ ಹೊಲಬರಿಯದ
ಭಾವದ ಜೀವವರಿಯದ ! _ಇದು ಕಾರಣ ನಿಮ್ಮ ಶರಣನು ಲಿಂಗಸ್ವಯಶಕ್ತಿಶರಣ ತಾನೆ.