ಕೊಟ್ಟ ಕುದುರೆಯನೇರಲರಿಯದೆ ಮತ್ತೊಂದು ಕುದುರೆಯನೇರ ಬಯಸುವರು ವೀರರೂ ಅಲ್ಲ ಧೀರರೂ ಅಲ್ಲ ಇದು ಕಾರಣ_ ನೆರೆ ಮೂರು ಲೋಕವೆಲ್ಲವೂ ಹಲ್ಲಣವ ಹೊತ್ತುಕೊಂಡು ತೊಳಲುತ್ತ ಇದ್ದಾರೆ. ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರು ?