ಕೊಲ್ಲೆನಯ್ಯಾ ಪ್ರಾಣಿಗಳ ಮೆಲ್ಲೆನಯ್ಯಾ ಬಾಯಿಚ್ಛೆಗೆ ಒಲ್ಲೆನಯ್ಯಾ ಪರಸತಿಯರ ಸಂಗವ ಬಲ್ಲೆನಯ್ಯಾ ಮುಂದೆ ತೊಡಕುಂಟೆಂಬುದ. ಬಳ್ಳದ ಬಾಯಂತೆ ಒಂದೆ ಮನ ಮಾಡಿ ನಿಲ್ಲೆಂದು ನಿಲಿಸಯ್ಯಾ ಕೂಡಲಸಂಗಮದೇವಾ.