ಕೋಣನ ಕೊಂಬಿನ ತುದಿಯಲ್ಲಿ ಏಳುನೂರೆಪ್ಪತ್ತು ಸೇದೆಯ ಬಾವಿ. ಬಾವಿಯೊಳಗೊಂದು ಬಗರಿಗೆ ಬಗರಿಗೆಯೊಳಗೊಬ್ಬ ಸೂಳೆ ನೋಡಯ್ಯಾ. ಆ ಸೂಳೆಯ ಕೊರಳಲ್ಲಿ ಏಳುನೂರೆಪ್ಪತ್ತು ಆನೆ ನೇರಿತ್ತ ಕಂಡೆ ಗುಹೇಶ್ವರಾ.