ಕೋಪ_ತಾಪವ ಬಿಟ್ಟು ಭ್ರಾಂತಿಭ್ರಮೆಯಂ ಬಿಟ್ಟು ಜಂಗಮವಾಗಬೇಕು ಕಾಣಿರೆ ಮರುಳುಗಳಿರಾ ಇಂತೀ ಕಡುಲೋಭದ ರುಚಿ ಹಿಂಗಿ ಜಂಗಮವಾದಲ್ಲದೆ ಭವ ಹಿಂಗದು ಕಾಣಾ ಗುಹೇಶ್ವರ.