ಟಿ.ಪಿ.ಕೈಲಾಸಂ ಅವರ 'ಕೋಳಿಕೆ ರಂಗ' ಕವನ

ಸಂಪಾದಿಸಿ
  • ಅವರು ಇಂಗ್ಲೆಂಡಿನಲ್ಲಿದ್ದಾಗ 'ಕಾನ್ಸ್ಟಂಟಿನೊಪಲ್' ಕವನವನ್ನು ಒಬ್ಬ ಇಂಗ್ಲಿಷ್ ಸಂಗೀತಗಾರ ಹೊಸ ರಾಗದಲ್ಲಿ ಹಾಡಿ, ಇದೇ ರಾಗದಲ್ಲಿ ಬೇರೆ ಹಾಡು ಹಾಡಿದರ ಅವರಿಗ ಬಹುಮಾನ ಕೊಡುವುದಾಗಿ ಸವಾಲು ಹಾಕುತ್ತಾನೆ. ಆಗ ಕೈಲಾಸಂ ಅದೇರಾಗದಲ್ಲಿ 'ಕೋಳಿಕೆ ರಂಗಾ' ಹಾಡು ಹೇಳಿ ಬಹುಮಾನ ಗಿಟ್ಟಿಸಿಕೊಳ್ಳುತ್ತಾರೆ ಎಂದು ಹೇಳಿಕೆ ಇದೆ. ಆ ಹಾಡು ಹೀಗಿದೆ (ಸುಮಾರು ೧೯೨೦ ರಲ್ಲಿ ರಚನೆ.)[]

"ಕೋಳಿಕೆ ರಂಗ... / Kolike Ranga"

ಸಂಪಾದಿಸಿ
  • Constantinople

C O N S T A N T I N O P L E
C O N S T A N T I N O P L E
Use your pluck now try your luck to sing along with me,

Constantinople
C O N S T A N T I N O P L E
C O N S T A N T I N O P L E
It’s as easy to sing as you sing your A-B-C.

ನಾನು ಕೋಳಿಕೆ ರಂಗ
‘ಕೋ’ನು ‘ಳಿ’ನು ‘ಕೆ’ನು ‘ರ’ನು ಸೊನ್ನೆ ಗ
ಕಕೋತ್ವ ಳಿ ಕಕೆತ್ವ ರ ಮತ್ ಸೋನ್ನೆಯುನು ಗ
ಇದ್ನ ಹಾಡೋಕ್ ಬರ್ದೆ ಬಾಯ್ ಬಿಡೋವ್ನು ಹಃ ಹಃ ಹಃ
ಬೆಪ್ಪು ನನ್ ಮಗ

ನಾನು ಕೋಳಿಕೆ ರಂಗ
‘ಕೋ’ನು ‘ಳಿ’ನು ‘ಕೆ’ನು ‘ರ’ನು ಸೊನ್ನೆ ಗ
ಕಕೊತ್ವ ಳಿ ಕಕೆತ್ವ ರ ಮತ್ ಸೋನ್ನೆಯುನು ಗ
ನಮ್ಮ ತಿಪ್ಪಾರಳ್ಳಿ ಬೋರನ್ ಅಣ್ಣನ್ ತಮ್ಮನ್ ದೊಡ್ಡ್ ಮಗ

ನಾ ಹುಟ್ಟಿದ್ ದೊಡ್ದ್ರಳ್ಳಿ, ಬೆಳ್ದಿದ್ ಬ್ಯಾಡ್ರಳ್ಳಿ,
ಮದುವೆ ಮಾರ್ನಳ್ಳಿ ಬೆಳೆಗಳ್ ಹಾರ್ನಳ್ಳಿ;
ನಮ್ ಶಾನ್ಬ್ಹೊಗಯ್ಯ, ಅಲ್ದೆ ಶೆಕ್ದಾರಪ್ಪ
ಇವ್ರೆಲ್ರು ಕಂಡವ್ರೆ ನನ್ನಾ.

ಹೆಂಡರ್ನು ಮಕ್ಕಳ್ನು ಬಿಟ್ಟು, ಹಟ್ಟಿ ಅದನ್ನು ಬಿಟ್ಟು,
ಬಂದಿವ್ನಿ ನಾ, ನಿಮ್ಮುಂದೆ ನಿಂತಿವ್ನಿ ನಾ
ನಂಹಳ್ಳಿ ಕಿಲಾಡಿ ಹುಂಜಾ!

ನಾನು ಕೋಳಿಕೆ ರಂಗ
‘ಕೋ’ನು ‘ಳಿ’ನು ‘ಕೆ’ನು ‘ರ’ನು ಸೊನ್ನೆ ಗ
ಕಕೋತ್ವ ಳಿ ಕಕೆತ್ವ ರ ಮತ್ ಸೋನ್ನೆಯುನು ಗ
ಇದ್ನ ಹಾಡೋಕ್ ಬರ್ದೆ ಬಾಯ್ ಬಿಡೋವ್ನು ಹಃ ಹಃ ಹಃ
ಬೆಪ್ಪು ನನ್ ಮಗ

ಎತ್ತಿಲ್ಲದ್ ಬಂಡಿಗಳುವೆ ಎಣ್ಣೆಲ್ಲದ್ ದೀಪಗಳುವೆ,
ತುಂಬಿದ್ ಮೈಸೂರಿಗ್ ಬಂದೆ;
ದೊಡ್ಡ್ ಚೌಕದ ಮುಂದೆ, ದೊಡ್ಡ್ ಗಡಿಯಾರದ ಹಿಂದೆ
ಕಟ್ ತಂದಿದ್ ಬುತ್ತಿನ್ ತಿಂತಿದ್ದೆ.

ಅಲ್ ಕುದ್ರೆಮೇಲ್ ಕುಂತಿದ್ದೊಬ್ಬ್ ಸವಾರಯ್ಯ, ಕೆದ್ರಿದ್ ತನ್ ಮೀಸೆಮೇಲ್ ಹಾಕ್ದ ತನ್ ಕೈಯ್ಯ,
ಕೇಳ್ತಾನ್ ನನ್ನಾ ಗದ್ರುಸ್ತಾಲಿ ಬೆದ್ರುಸ್ತಾಲಿ “ಲೇ, ಯಾರೋ ಯಾಕೋ ಇಲ್ಲಿ” ಅಂತ!
ಹಃ ನಾನು..

ನಾನು ಕೋಳಿಕೆ ರಂಗ
‘ಕೋ’ನು ‘ಳಿ’ನು ‘ಕೆ’ನು ‘ರ’ನು ಸೊನ್ನೆ ಗ
ಕಕೊತ್ವ ಳಿ ಕಕೆತ್ವ ರ ಮತ್ ಸೋನ್ನೆಯುನು ಗ
ಇದ್ನ ಹಾಡೋಕ್ ಬರ್ದೆ ಬಾಯ್ ಬಿಡೋವ್ನು
ಬೆಪ್ ನನ್ ಮಗ.
- ಟಿ. ಪಿ. ಕೈಲಾಸಂ*

[]

ಪರಿವಿಡಿ

ಸಂಪಾದಿಸಿ

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ

ಸಂಪಾದಿಸಿ
  1. T.P. Kailasam
  2. ಕೋಳಿಕೆ ರಂಗ... / Kolike Ranga